Site icon Vistara News

Weather report : ಬೆಂಗಳೂರಲ್ಲಿ ಸಂಜೆಗೆ ಮಳೆ ಅಬ್ಬರ; ಕರಾವಳಿಗೆ ಯೆಲ್ಲೋ ಅಲರ್ಟ್‌!

Girl Enjoying rain in road

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ (Weather report) ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯೊಂದಿಗೆ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಾಥ್‌ ನೀಡಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಬಿರುಗಾಳಿ ಮುನ್ನೆಚ್ಚರಿಕೆ

ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಇನ್ನು ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ನೈರುತ್ಯ ಮುಂಗಾರು ಬುಧವಾರ ರಾಜ್ಯಾದ್ಯಂತ ದುರ್ಬಲವಾಗಿತ್ತು. ಚನ್ನಪಟ್ಟಣದಲ್ಲಿ 3, ಧರ್ಮಸ್ಥಳ, ಗೇರುಸೊಪ್ಪ, ಸಕಲೇಶಪುರ, ಮದ್ದೂರು, ಮಡಿಕೇರಿ ಎಡಬ್ಲ್ಯುಎಸ್ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಮಾಣಿ, ಪುತ್ತೂರು, ಮುರುಗೋಡ, ಕೊಪ್ಪಳ ಎಡಬ್ಲ್ಯೂಎಸ್, ವಿರಾಜಪೇಟೆ, ಲಿಂಗನಮಕ್ಕಿ, ಕಮ್ಮರಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 29 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಇದನ್ನೂ ಓದಿ: Bus Ticket: ಆಯುಕ್ತರ ಸೂಚನೆಗೆ ಡೋಂಟ್‌ ಕೇರ್‌, ಹಬ್ಬದ ನೆಪದಲ್ಲಿ ಖಾಸಗಿ ಬಸ್‌ ಟಿಕೆಟ್‌ ದರ ಯದ್ವಾತದ್ವಾ ಏರಿಕೆ

ಸೆಪ್ಟೆಂಬರ್‌ 14ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0421.0927414498
ಆಲಮಟ್ಟಿ ಜಲಾಶಯ
(Almatti Dam)
519.6113.92130933684
ಮಲಪ್ರಭಾ ಜಲಾಶಯ (Malaprabha Dam)633.8021.570194
ಘಟಪ್ರಭಾ ಜಲಾಶಯ
(Ghataprabha Dam)
662.9141.871033181
ತುಂಗಾಭದ್ರಾ ಜಲಾಶಯ (Tungabhadra Dam)497.7167.81216410233
ಭದ್ರಾ ಜಲಾಶಯ (Bhadra Dam)657.7344.214312491
ಕಬಿನಿ ಜಲಾಶಯ (Kabini Dam)696.1314.8646053490
ಹಾರಂಗಿ
(Harangi Dam)
871.388.341067800
ಲಿಂಗನಮಕ್ಕಿ (Linganamakki Dam) 554.4466.9328984996
ಹೇಮಾವತಿ
(Hemavathi Dam)
890.5819.0210696050

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version