ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯಲ್ಲಿ ಮಳೆ ಅಬ್ಬರಿಸಿದ್ದರೆ, ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ (Weather report) ಇದೆ. ಐಎಂಡಿ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ (Rain News) ಎಚ್ಚರಿಕೆ (Weather report) ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಡಗಿನಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ.
ಇದನ್ನೂ ಓದಿ: Karnataka Bandh : ಯಾರ್ರೀ ಈ ವಾಟಾಳ್ ನಾಗರಾಜ್? ಅವರು ಹೇಳಿದ್ರೂಂತ ನಾವ್ಯಾಕೆ ಬಂದ್ ಮಾಡ್ಬೇಕು?
ಒಳನಾಡಿನಲ್ಲಿ ವ್ಯಾಪಕದಿಂದ ಸಾಧಾರಾಣ
ಉತ್ತರ ಒಳನಾಡಿನ ಬೀದರ್ ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ ಮತ್ತು ಯಾದಗಿರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಮನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸಂಜೆಗೆ ಮಳೆ ಕಾಟ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಸಂಜೆ ವೇಳೆಗೆ ಮಳೆಯಾಗುವ ಬಹಳ ಸಾಧ್ಯತೆ ಇವೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ 40-45 ಕಿ.ಮೀ ವೇಗದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ಮಂಗಳೂರು: 29 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ