ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗುವ (Weather report) ಬಹಳಷ್ಟು ಸಾಧ್ಯತೆ ಇದೆ.
ಜತೆಗೆ ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಭಾರೀ ಮಳೆ ಮುನ್ನೆಚ್ಚರಿಕೆ
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗದಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಇದೆ. ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇಲ್ಲೆಲ್ಲ ಸುರಿದ ಮಳೆ?
ಭಾರಿ ಮಳೆಯು ಗೋಕರ್ಣದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕುಮಟ, ಅಂಕೋಲದಲ್ಲಿ ತಲಾ 6 ಸೆಂ.ಮೀ, ಹೊನ್ನಾವರ 5, ಕಾರವಾರ 4, ಕೊಲ್ಲೂರು 3 ಸೆಂ.ಮೀ ಮಳೆಯಾಗಿದೆ. ಉಡುಪಿ, ಮುನಿರಾಬಾದ್, ಹೆಸರಘಟ್ಟ, ಕಳಸ, ಲಿಂಗನಮಕ್ಕಿ ಎಚ್‌ಎಂಎಸ್, ಕಂಪ್ಲಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕುಂದಾಪುರ, ಕೋಟ, ಯಲ್ಲಾಪುರ, ಗೇರುಸೊಪ್ಪ, ರೋನ್, ಕುಂದಗೋಳ , ಗಂಗಾವತಿ, ತಿಪಟೂರು, ಜಯಪುರ, ಕಮ್ಮರಡಿ, ಬಾಳೆಹೊನ್ನೂರು, ಸಂಡೂರು, ಹೊಸಪೇಟೆ, ಬಿ ದುರ್ಗ, ಮಾಲೂರಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ಸೆಪ್ಟೆಂಬರ್ 21ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 20.61 | 6016 | 5735 |
ಆಲಮಟ್ಟಿ ಜಲಾಶಯ (Almatti Dam) | 519.6 | 114.73 | 405 | 405 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.44 | 0 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.40 | 2311 | 181 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 62.92 | 4378 | 10316 |
ಭದ್ರಾ ಜಲಾಶಯ (Bhadra Dam) | 657.73 | 43.23 | 290 | 290 |
ಕಬಿನಿ ಜಲಾಶಯ (Kabini Dam) | 696.13 | 14.80 | 3166 | 4390 |
ಹಾರಂಗಿ (Harangi Dam) | 871.38 | 8.06 | 1335 | 2791 |
ಲಿಂಗನಮಕ್ಕಿ (Linganamakki Dam) | 554.44 | 68.30 | 5493 | 5393 |
ಹೇಮಾವತಿ (Hemavathi Dam) | 890.58 | 17.66 | 4986 | 1300 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ