Site icon Vistara News

Weather report : ಇಂದು – ನಾಳೆ ಬೆಂಗಳೂರಲ್ಲಿ ಭರ್ಜರಿ ವರುಣ; ಕರಾವಳಿಯಲ್ಲಿ ಗಾಳಿ ಸಹಿತ ಮಳೆ

girl playing and dancing in rain

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಗುರುವಾರ (ಸೆಪ್ಟೆಂಬರ್‌ 21) ವರೆಗೆ ಕರಾವಳಿ ಜಿಲ್ಲೆಗಳಲ್ಲಿ (coastal karnataka) ಭಾರಿ ಮಳೆ (Rain News) ಆಗಲಿದ್ದು, ದಕ್ಷಿಣ ಒಳನಾಡಿನ (South Inland) ಹಲವು ಕಡೆ ಹಾಗೂ ಉತ್ತರ ಒಳನಾಡಿನ (North Inland) ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಮನೆಯಿಂದ ಹೊರಗೆ ಹೋಗುವವರು ಎಚ್ಚರಿಕೆ ವಹಿಸಬೇಕು ಎಂದು ಹೇಳಲಾಗಿದೆ. ಆದರೆ, ಮೀನುಗಾರರಿಗೆ ಯಾವುದೇ ರೀತಿಯ ಎಚ್ಚರಿಕೆಯನ್ನು ನೀಡಲಾಗಿಲ್ಲ. ಹೀಗಾಗಿ ಮೀನುಗಾರರು ನಿರಾತಂಕವಾಗಿ ಮೀನುಗಾರಿಕೆಯಲ್ಲಿ ತೊಡಗಬಹುದಾಗಿದೆ.

ರಾಜ್ಯದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿ ಮಳೆ ಸಂದರ್ಭಗಳಲ್ಲಿ ಮರದ ಕೆಳಗೆ ನಿಲ್ಲುವುದು, ದುರ್ಬಲ ಕಟ್ಟಡದ ಕೆಳಗೆ ಆಶ್ರಯ ಪಡೆಯುವುದನ್ನು ಮಾಡಬಾರದು. ಆದರೆ, ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಕಾಣುತ್ತಿಲ್ಲ ಎಂದೂ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹೇಗೆ?

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲು ಕಳೆದ ಎರಡು-ಮೂರು ದಿನಗಳಿಂದ ಭಾರಿ (Bangalore Rain) ಮಳೆಯಾಗುತ್ತಲಿದೆ. ಈ ಮಳೆ ಪ್ರಮಾಣವು ಮುಂದುವರಿಯಲಿದ್ದು, ಬುಧವಾರ ಮತ್ತು ಗುರುವಾರ ಸಂಜೆ ಅಥವಾ ರಾತ್ರಿ ವೇಳೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಇನ್ನು ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೂ ಆಗಾಗ ಬಿಸಿಲೂ ಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ : Cauvery Dispute : ಸಂಸದರ ಸಭೆಯಲ್ಲಿ ಸಿದ್ದರಾಮಯ್ಯ- ಪ್ರಹ್ಲಾದ್‌ ಜೋಶಿ ಜಟಾಪಟಿ; ಮೋದಿಯನ್ನು ಎಳೆಯಬೇಡಿ ಎಂದ ಜೋಶಿ

ಸೆಪ್ಟೆಂಬರ್‌ 20ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.5970075232
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.460194
ಘಟಪ್ರಭಾ ಜಲಾಶಯ
(Ghataprabha Dam)
662.9142.211314181
ತುಂಗಾಭದ್ರಾ ಜಲಾಶಯ (Tungabhadra Dam)497.7163.43210910355
ಭದ್ರಾ ಜಲಾಶಯ (Bhadra Dam)657.7343.235512357
ಕಬಿನಿ ಜಲಾಶಯ (Kabini Dam)696.1314.9235254053
ಹಾರಂಗಿ
(Harangi Dam)
871.388.1920572299
ಲಿಂಗನಮಕ್ಕಿ (Linganamakki Dam) 554.4468.3057381907
ಹೇಮಾವತಿ
(Hemavathi Dam)
890.5817.3548943490

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version