Site icon Vistara News

Weather report : ಮುಂದಿನ 5 ದಿನ ಬೆಂಗಳೂರು ಸೇರಿ ಕರಾವಳಿಯಲ್ಲಿ ಭರ್ಜರಿ ಮಳೆ ಪ್ರದರ್ಶನ

Man holding Umbreala

ಬೆಂಗಳೂರು: ಕರಾವಳಿ ಸೇರಿದಂತೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನಲ್ಲಿ ಸಾಕಷ್ಟು ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ.

ಬೆಂಗಳೂರು ಸೇರಿ ಮೈಸೂರಲ್ಲೂ ಸಾಧಾರಣ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಭಾಗದಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದಂತೆ ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮಂಡ್ಯ ಅತಿ ಕಡಿಮೆ ಮಳೆಯಾಗಲಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 24ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6160165735
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.440194
ಘಟಪ್ರಭಾ ಜಲಾಶಯ
(Ghataprabha Dam)
662.9142.402311181
ತುಂಗಾಭದ್ರಾ ಜಲಾಶಯ (Tungabhadra Dam)497.7162.92437810316
ಭದ್ರಾ ಜಲಾಶಯ (Bhadra Dam)657.7343.23290290
ಕಬಿನಿ ಜಲಾಶಯ (Kabini Dam)696.1314.8031664390
ಹಾರಂಗಿ
(Harangi Dam)
871.388.0613352791
ಲಿಂಗನಮಕ್ಕಿ (Linganamakki Dam) 554.4468.3054935393
ಹೇಮಾವತಿ
(Hemavathi Dam)
890.5817.6649861300

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version