Site icon Vistara News

Weather report : ಬೆಂಗಳೂರು ಸೇರಿ ಕರಾವಳಿ, ಮಲೆನಾಡಲ್ಲಿ ಸುರಿಯಲಿದೆ ಮಳೆ

child enjoying rain in road

ಬೆಂಗಳೂರು: ಮಧ್ಯ ಬಂಗಾಳಕೊಳ್ಳಿಯಲ್ಲಿ ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇನ್ನೆರಡು ದಿನಗಳು ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಐದು ದಿನಗಳು ಭಾರಿ (Weather report) ಮಳೆಯಾಗಲಿದೆ.

ಇನ್ನು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮೂರು ದಿನಗಳು ಹಗುರದಿಂದ ಸಾಧಾರಣವಾಗಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಇನ್ನೆರಡು ದಿನಗಳು ಹಗುರ (Rain News) ಮಳೆಯಾಗಲಿದೆ. ಜತೆಗೆ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ (Weather report) ಇದೆ.

ಸಂಜೆಗೆ ಮಳೆ ಅಲರ್ಟ್‌

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನೆರಡು ದಿನಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡಿನ ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಲಘು ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಇರಲಿದ್ದು, ಅಲ್ಲಲ್ಲಿ ಅತಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ಮಂಗಳೂರು: 29 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 29 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 30 ಡಿ.ಸೆ – 24 ಡಿ.ಸೆ

ಇದನ್ನೂ ಓದಿ: Chaitra Kundapura : ಆತ್ಮಹತ್ಯೆಗೆ ಯತ್ನಿಸಿದ ಚೈತ್ರಾ ಕುಂದಾಪುರ; ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು, CCBಗೆ Tension

ಸೆಪ್ಟೆಂಬರ್‌ 15ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.9329854742
ಆಲಮಟ್ಟಿ ಜಲಾಶಯ
(Almatti Dam)
519.6114.416053405
ಮಲಪ್ರಭಾ ಜಲಾಶಯ (Malaprabha Dam)633.8021.550194
ಘಟಪ್ರಭಾ ಜಲಾಶಯ
(Ghataprabha Dam)
662.9141.951172184
ತುಂಗಾಭದ್ರಾ ಜಲಾಶಯ (Tungabhadra Dam)497.7167.08189510304
ಭದ್ರಾ ಜಲಾಶಯ (Bhadra Dam)657.7344.034312491
ಕಬಿನಿ ಜಲಾಶಯ (Kabini Dam)696.1314.9242293490
ಹಾರಂಗಿ
(Harangi Dam)
871.388.2913021818
ಲಿಂಗನಮಕ್ಕಿ (Linganamakki Dam) 554.4466.5422116554
ಹೇಮಾವತಿ
(Hemavathi Dam)
890.5818.568076050

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version