ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Southwest monsoon) ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಮುಂದಿನ 24 ಗಂಟೆಯಲ್ಲಿ ಮಲೆನಾಡು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: Theft Case : ಕಳ್ಳನಿಂದ ತಪ್ಪಿಸಿಕೊಂಡು ಮರಳಿ ಮಾಲೀಕನ ಮನೆ ಸೇರಿದ `ಜಾಣ ಎತ್ತುಗಳು’
ಗುಡುಗು ಸಹಿತ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ನಗರ, ಮಂಡ್ಯ, ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಕೆಲವು ಕಡೆ ಒಣಹವೆ ಇರಲಿದೆ. ಇನ್ನು ಬೆಂಗಳೂರು ಸುತ್ತಮುತ್ತ ಕೆಲವೊಮ್ಮೆ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸೂರ್ಯನ ದರ್ಶನ ಇರಲಿದೆ. ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ