ಬೆಂಗಳೂರು: ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ (Weather report) ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರಿ (Rain News) ಮಳೆಯಾಗಲಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Suspicious Death : 2 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು; ಗಂಡನಿಂದಲೇ ಕೊಲೆ ಶಂಕೆ
ಗುರುವಾರದಂದು ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು. ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಲ್ಲಿ ಮಳೆ ಕೊರತೆ ಶೇ.3ರಷ್ಟು ಇದ್ದರೆ, ಕರಾವಳಿಯಲ್ಲಿ ಶೇ.20ರಷ್ಟು, ದಕ್ಷಿಣ ಒಳನಾಡಲ್ಲಿ ಶೇ. 26ರಷ್ಟಿದೆ. ಪಣಂಬೂರು, ಭಾಗಮಂಡಲದಲ್ಲಿ ತಲಾ 6 ಸೆಂ.ಮೀ, ಸುಳ್ಯದಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಾಣಿ, ಧರ್ಮಸ್ಥಳ, ಪುತ್ತೂರು ಎಚ್ಎಂಎಸ್, ಮಂಗಳೂರು, ಕುಂದಾಪುರ, ಗೋಕರ್ಣ, ಸಕಲೇಶಪುರ , ನಾಪೋಕ್ಲು ತಲಾ 4 ಸೆಂ.ಮೀ , ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳ, ಉಡುಪಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 3 ಸೆಂ.ಮೀ ಮಳೆಯಾಗಿದೆ.
ಕ್ಯಾಸಲ್ ರಾಕ್, ಗೇರುಸೊಪ್ಪ , ಶಿರಾಲಿ, ಬೆಳ್ತಂಗಡಿ, ಸಿದ್ದಾಪುರ ,ವಿರಾಜಪೇಟೆ, ಪೊನ್ನಂಪೇಟೆ ಪಿಡಬ್ಲ್ಯೂಡಿ , ಕೊಟ್ಟಿಗೆಹಾರ , ಶೃಂಗೇರಿ ಎಚ್ಎಂಎಸ್ , ಬಂಡೀಪುರ , ಹುಂಚಡಕಟ್ಟೆ ತಲಾ 2 ಸೆಂ.ಮೀ ಹಾಗೂ ಉಪ್ಪಿನಂಗಡಿ, ಮಂಕಿ, ಯಲ್ಲಾಪುರ, ಜೋಯಿಡಾ, ಅಂಕೋಲಾ , ಕೋಟ, ಕೊಲ್ಲೂರು, ಸಿಂದಗಿ , ಕೆಂಭಾವಿ, ಕೃಷ್ಣರಾಜಸಾಗರ ಕುಣಿಗಲ್, ಜಯಪುರ, ಕಮ್ಮರಡಿ, ಬಾಳೆಹೊನ್ನೂರು, ಕಳಸ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ , ಎಲೆಕ್ಟ್ರಾನಿಕ್ ಸಿಟಿ , ಲಿಂಗನಮಕ್ಕಿ ಎಚ್ಎಂಎಸ್ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ