ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾದರೆ, ಮಲೆನಾಡು, ಕರಾವಳಿ ಸೇರಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಮಳೆಯಾಗುವ (Weather update) ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ಚಿಕ್ಕಬಳ್ಳಾಪುರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಯಾದ ಯಾದಗಿರಿ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿ, ಮಲೆನಾಡಿನಲ್ಲಿ ಅಲ್ಪ ಮಳೆ
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ತೀರಾ ಕಡಿಮೆ ಮಳೆ ಬೀಳಲಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 21 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ
ಆಗಸ್ಟ್ 29ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 24.32 | 1328 | 2345 |
ಆಲಮಟ್ಟಿ ಜಲಾಶಯ (Almatti Dam) | 519.6 | 122.48 | 0 | 3049 |
ಮಲಪ್ರಭಾ ಜಲಾಶಯ (Malaprabha Dam) | 633.80 |
| 894 | 894 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.11 | 725 | 4703 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 81.10 | 1636 | 10730 |
ಭದ್ರಾ ಜಲಾಶಯ (Bhadra Dam) | 657.73 | 48.30 | 1279 | 3224 |
ಕಬಿನಿ ಜಲಾಶಯ (Kabini Dam) | 696.13 | 13.66 | 1689 | 4325 |
ಹಾರಂಗಿ (Harangi Dam) | 871.38 | 7.94 | 518 | 1700 |
ಲಿಂಗನಮಕ್ಕಿ (Linganamakki Dam) | 554.44 | 71.54 | 1156 | 4694 |
ಹೇಮಾವತಿ (Hemavathi Dam) | 890.58 | 26.12 | 563 | 5210 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ