Site icon Vistara News

Weather report : ನಾಳೆ ಬೆಂಗಳೂರು ಸೇರಿ ಕರಾವಳಿಯಲ್ಲಿ ಗಾಳಿ ಸಹಿತ ಮಳೆ

Rain accompanied by gusty winds Boy and girl enjoying RAin

ಬೆಂಗಳೂರು : ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ (Weather report) ಮಳೆಯಾಗಲಿದೆ.

ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಕೆಲವು ಕಡೆ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ಹವಾಮಾನ ತಜ್ಞರು ಮುನ್ಸೂಚನೆಯನ್ನು ನೀಡಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: School Timing : ಮತ್ತೆ ಬದಲಾಗುತ್ತಾ ಶಾಲಾ ಸಮಯ!

ಕರಾವಳಿಯಲ್ಲಿ ಚುರುಕುಗೊಂಡಿರುವ ಮುಂಗಾರು

ರಾಜ್ಯದಲ್ಲಿ ಸೋಮವಾರ (ಸೆ.18) ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು. ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರಿ ಮಳೆ ಕುಮಟದಲ್ಲಿ 9 ಸೆಂ.ಮೀ ವರದಿ ಆಗಿದೆ. ಗೋಕರ್ಣ 6, ಕಾರವಾರ 5 ಹಾಗೂ ಕದ್ರಾ, ಕೊಲ್ಲೂರು ತಲಾ 4 ಸೆಂ.ಮೀ ಮಳೆಯಾಗಿದೆ. ಪಣಂಬೂರು, ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣ, ಕೊಟ್ಟಿಗೆಹಾರ, ಚನ್ನಪಟ್ಟಣ, ರಾಮನಗರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಅಂಕೋಲಾ, ಯಲ್ಲಾಪುರ, ಮಂಕಿ, ಕಾರ್ಕಳ, ಕುಂದಾಪುರ ಸೇರಿ ಲೋಂಡಾ, ಬೆಂಗಳೂರು ನಗರ, ಪೊನ್ನಂಪೇಟೆ ಪಿಡಬ್ಲ್ಯೂಡಿ, ಹುಣಸೂರು, ಕನಕಪುರ, ಹೆಸರಗಟ್ಟ, ಉತ್ತರಹಳ್ಳಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಗೇರುಸೊಪ್ಪ , ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಸೇಡಬಾಳ, ಕಣಬರ್ಗಿ AWS , ಬೆಳಗಾವಿ ನಗರ, ಅಫಜಲಪುರ ಎಚ್‌ಎಂಎಸ್ , ಕುಡಲಸಂಗಮ, ಭಾಗಮಂಡಲ, ಕೊಪ್ಪ, ಶೃಂಗೇರಿ ಎಚ್‌ಎಂಎಸ್, ಸಕಲೇಶಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version