Site icon Vistara News

Weather Report : ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿ; ಇನ್ನೊಂದು ವಾರ ಅಲರ್ಟ್‌

Girl enjoying Rain

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಸೆ.17ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ (Weather report) ಇದೆ. ಮುಂದಿನ 24 ಗಂಟೆಯಲ್ಲಿ (Weather report) ಆರು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಇನ್ನೊಂದು ವಾರ (Rain News) ಭಾರಿ ಮಳೆಯಾಗಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮೋಡ ಕವಿದ ವಾತಾವರಣ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 17ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6729784735
ಆಲಮಟ್ಟಿ ಜಲಾಶಯ
(Almatti Dam)
519.6114.734050
ಮಲಪ್ರಭಾ ಜಲಾಶಯ (Malaprabha Dam)633.8021.520194
ಘಟಪ್ರಭಾ ಜಲಾಶಯ
(Ghataprabha Dam)
662.9142.09897182
ತುಂಗಾಭದ್ರಾ ಜಲಾಶಯ (Tungabhadra Dam)497.7165.61173210239
ಭದ್ರಾ ಜಲಾಶಯ (Bhadra Dam)657.7343.694542491
ಕಬಿನಿ ಜಲಾಶಯ (Kabini Dam)696.1314.9629784735
ಹಾರಂಗಿ
(Harangi Dam)
871.388.2313231800
ಲಿಂಗನಮಕ್ಕಿ (Linganamakki Dam) 554.4466.8073654322
ಹೇಮಾವತಿ
(Hemavathi Dam)
890.5817.719366050

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version