ಬೆಂಗಳೂರು: ರಾಜ್ಯದ ಹಲವೆಡೆ ಸೋಮವಾರ ಮಳೆ (Rain News) ಅಬ್ಬರ ಜೋರಾಗಿ ಇರಲಿದೆ. ಬೆಂಗಳೂರಲ್ಲಿ ಖಾಸಗಿ ಚಾಲಕರ ಒಕ್ಕೂಟವು ಬೆಂಗಳೂರು ಬಂದ್ಗೆ ಕರೆ ನೀಡಿದ್ದು, ಚಾಲಕರ ಪ್ರತಿಭಟನೆಗೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸುತ್ತಮುತ್ತ ಸೂರ್ಯ ಕಾಣೆಯಾಗಿದ್ದು, ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ ಇದೆ. ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಸೆ.11ರಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಮುಂದಿನ 24 ಗಂಟೆಯಲ್ಲಿ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.
ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀಯಿಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Bengaluru Bandh: ಬೆಂಗಳೂರು ಬಂದ್ ಬಿಸಿ; ಏರ್ಪೋರ್ಟ್ ಟ್ಯಾಕ್ಸಿಗೆ ಕಲ್ಲೇಟು, ಈ ಮಾರ್ಗ ಬದಲಾಯಿಸಿ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 31 ಡಿ.ಸೆ – 21 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ
ಸೆಪ್ಟೆಂಬರ್ 11ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್ಎಸ್ ಜಲಾಶಯ (KRS Dam) | 38.04 | 21.33 | 3415 | 3302 |
ಆಲಮಟ್ಟಿ ಜಲಾಶಯ (Almatti Dam) | 519.6 | 116.20 | 0 | 11701 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.65 | 194 | 277 |
ಘಟಪ್ರಭಾ ಜಲಾಶಯ (Ghataprabha Dam) | 662.91 | 41.64 | 601 | 180 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 70.58 | 1581 | 10256 |
ಭದ್ರಾ ಜಲಾಶಯ (Bhadra Dam) | 657.73 | 44.90 | 397 | 2584 |
ಕಬಿನಿ ಜಲಾಶಯ (Kabini Dam) | 696.13 | 14.35 | 6572 | 1100 |
ಹಾರಂಗಿ (Harangi Dam) | 871.38 | 7.63 | 2404 | 100 |
ಲಿಂಗನಮಕ್ಕಿ (Linganamakki Dam) | 554.44 | 67.62 | 3937 | 3885 |
ಹೇಮಾವತಿ (Hemavathi Dam) | 890.58 | 20.81 | 759 | 6030 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ