Site icon Vistara News

Weather report : ಉತ್ತರ ಒಳನಾಡಿನಲ್ಲಿಂದು ಸುರಿಯಲಿದೆ ಮಳೆ; ಬೆಂಗಳೂರಲ್ಲಿ ಹೇಗೆ?

Little boy holding a umbrella and Enjoying Rain

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದ್ದು, ಉತ್ತರ ಒಳನಾಡಿನಲ್ಲಿ (Weather report) ಸಾಧಾರಣವಾಗಿದೆ. ರಾಜ್ಯಾದ್ಯಂತ ಭಾನುವಾರ ಪ್ರತ್ಯೇಕ ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಚದುರಿದ ಮಳೆಯಾಗುವ (Rain News) ಸಾಧ್ಯತೆ ಇದೆ.

ಉತ್ತರ ಒಳನಾಡಿನ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣವಾಗಿರಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸಂಭವವಿದೆ.

ಬೆಂಗಳೂರಲ್ಲಿ ತುಂತುರು ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಅತಿ ಕಡಿಮೆ ಮಳೆ ಬೀಳಲಿದೆ. ಇತರೆ ಪ್ರದೇಶಗಳಲ್ಲಿ ಒಣಹವೆ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 29 ಡಿ.ಸೆ – 21 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಕಲಬುರಗಿ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 24 ಡಿ.ಸೆ

ಆಗಸ್ಟ್‌ 27ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಆಗಸ್ಟ್‌ 27ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0424.6024617371
ಆಲಮಟ್ಟಿ ಜಲಾಶಯ
(Almatti Dam)
519.6122.3101461
ಮಲಪ್ರಭಾ ಜಲಾಶಯ (Malaprabha Dam)633.8023.01694694
ಘಟಪ್ರಭಾ ಜಲಾಶಯ
(Ghataprabha Dam)
662.9141.767184841
ತುಂಗಾಭದ್ರಾ ಜಲಾಶಯ (Tungabhadra Dam)497.7180.31120610299
ಭದ್ರಾ ಜಲಾಶಯ (Bhadra Dam)657.7348.198043223
ಕಬಿನಿ ಜಲಾಶಯ (Kabini Dam)696.1314.1514224325
ಹಾರಂಗಿ
(Harangi Dam)
871.388.137531700
ಲಿಂಗನಮಕ್ಕಿ (Linganamakki Dam) 554.4472.0231197434
ಹೇಮಾವತಿ
(Hemavathi Dam)
890.5826.897165030
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version