ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಸೆ. 26ರಂದು ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ (weather report) ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಬೆಂಗಳೂರಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.
ಇದನ್ನೂ ಓದಿ:Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ
ರಾಜ್ಯದಲ್ಲಿ ಭಾನುವಾರದಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಶಹಪುರದಲ್ಲಿ 7 ಸೆಂ.ಮೀ ವರದಿ ಆಗಿದೆ. ಅಂಕೋಲಾ, ಹೆಬ್ಬೂರಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕುಮಟಾ, ಗೇರ್ಸೊಪ್ಪ, ಗೋಕರ್ಣ, ಮಂಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡದಲ್ಲಿ ತಲಾ 3 ಸೆಂ.ಮೀ, ಉಡುಪಿ, ಕಾರ್ಕಳ , ಮಂಗಳೂರು, ಉಪ್ಪಿನಂಗಡಿ, ಮೂಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್ , ಗಬ್ಬೂರು ಹಾಗೂ ಆಳಂದ, ಸೇಡಂ, ಕಳಸ, ಗುಬ್ಬಿ, ತಿಪಟೂರು, ಚಿತ್ರದುರ್ಗ, ಕುಡತಿನಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳೆ, ಗುಂಡಗುರ್ತಿ, ಆಡಕಿ, ಕವಡಿಮಟ್ಟಿ ಅರ್ಗ, ಭಾಲ್ಕಿ , ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ ಎಚ್ಎಂಎಸ್, ತಾಳಗುಪ್ಪ, ತ್ಯಾಗರ್ತಿ, ಯಗಟಿ , ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ