Weather Report : ನಾಳೆಯಿಂದ ಈ 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ - Vistara News

ಉಡುಪಿ

Weather Report : ನಾಳೆಯಿಂದ ಈ 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Weather Report : ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

Woman with umbrella enjoying the rain
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾದರೆ ಒಳನಾಡಿನಲ್ಲಿ ಹಗುರದಿಂದ ಕೂಡಿದ (Weather report) ಮಳೆಯಾಗಲಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಲಘು ಮಳೆಯಾಗುವ ಸಾಧ್ಯತೆ ಇದೆ. ಇತ್ತ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಿರುಗಾಳಿ ಮುನ್ನೆಚ್ಚರಿಕೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ. ಬಿರುಗಾಳಿ ಹಿನ್ನೆಲೆ ಜನರು ಮರದಡಿ ನಿಲ್ಲುವುದು, ಆಶ್ರಯ ಪಡೆಯದಂತೆ ಸೂಚಿಸಲಾಗಿದೆ

ಎಲ್ಲೆಲ್ಲಿ ಮಳೆಯ ಸಿಂಚನ?

ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಕ್ಯಾಸಲ್ ರಾಕ್‌ನಲ್ಲಿ 4 ಸೆಂ.ಮೀ ಮತ್ತು ಕದ್ರಾದಕಲ್ಲಿ 3 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಶಿರಾಲಿ, ಲೋಂಡಾದಲ್ಲಿ ತಲಾ 2 ಸೆಂ.ಮೀ ಹಾಗೂ ಮಂಚಿಕೆರೆ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಉಡುಪಿ, ಕಾರ್ಕಳ , ಮುನಿರಾಬಾದ್, ಶಿಡ್ಲಘಟ್ಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

Rain in Chikkaballapur
ಚಿಕ್ಕಬಳ್ಳಾಪುರದಲ್ಲಿ ಸುರಿದ ಧಾರಾಕಾರ ಮಳೆ

ಮಂಗಳವಾರ ಚಿಕ್ಕಬಳ್ಳಾಪುರದಲ್ಲಿ ತಂಪೆರೆದ ವರುಣ

ಮಂಗಳವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯ ಸಿಂಚನವಾಗಿದೆ. ಮಳೆಗಾಗಿ ಎದುರು ನೋಡುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮುಂಗಾರು ವಿಳಂಬದಿಂದ ರೈತರು ಕಂಗೆಟ್ಟಿದ್ದರು. ಸದ್ಯ ಮಳೆಯಿಂದಾಗಿ ರಾಗಿ, ಭತ್ತ ಬಿತ್ತನೆಗಾಗಿ ಸಜ್ಜಾಗುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather Forecast: ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡಿಗೆ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯೊಂದಿಗೆ, ವ್ಯಾಪಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಸುತ್ತಮುತ್ತ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಡಗು, ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್‌ ನೀಡಲಾಗಿದೆ. ಜತೆಗೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಜತೆಗೆ ವ್ಯಾಪಕ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮೇಘ ಸ್ಫೋಟ

ಪಶ್ಚಿಮ ಘಟ್ಟದ ತಪ್ಪಲು ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟಗೊಂಡಿದೆ. ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಭಾರೀ ಮಳೆ ಸುರಿದಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದಿದೆ.

ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್‌ಗಳು ಭಾರೀ ನೆರೆಯಿಂದ ಕೊಚ್ಚಿ ಹೋಗಿದೆ. ಮೊದಲು ಕೇರಳ ಮೂಲದ ವ್ಯಕ್ತಿಗೆ ಸೇರಿದ್ದ ರಬ್ಬರ್ ತೋಟ ಜಲಾವೃತಗೊಂಡಿದೆ. ಬಳಿಕ ಮನೆಗೆ ನುಗ್ಗಿ ಅಂಗಳದಲ್ಲಿ ನಿಲ್ಲಿಸಿದ್ದ ಆಕ್ಟೋ ಕಾರು ಹಾಗೂ ಎರಡು ಬೈಕ್ ನೀರು ಪಾಲಾಗಿದೆ. ಹೊಸಕಂಬೃ ಕೃಷ್ಣ ಪೂಜಾರಿ ಎಂಬವರ ಮನೆಯಲ್ಲಿ ನಿಲ್ಲಿಸಿದ್ದ ಓಮ್ಮಿ ಕಾರು ನೀರುಪಾಲಾಗಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಸಾವು

ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಣಕಾರ್ ನಾರಪ್ಪ (58), ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿ. ಹಗರಿಬೊಮ್ಮನಹಳ್ಳಿ ತಹಸೀಲ್ದಾರ್ ಕವಿತಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸತತ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧ ಸಾವು

Karnataka Rain : ದಾವಣಗೆರೆಯಲ್ಲಿ ಸತತ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ವಿಜಯನಗರದಲ್ಲಿ ಮಳೆಯಿಂದಾಗಿ ಮನೆಗಳಿಗೆ ಹಾನಿಯಾಗಿವೆ.

VISTARANEWS.COM


on

By

karnataka rain
Koo

ದಾವಣಗೆರೆ: ಸತತ ಮಳೆಯಿಂದ ಗೋಡೆ ಕುಸಿದು ವೃದ್ಧ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕುಳಗಟ್ಟೆ ಬಸವರಾಜಪ್ಪ (81) ಗೋಡೆ ಬಿದ್ದು ಮೃತಪಟ್ಟವರು. ದಾವಣಗೆರೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಪುಷ್ಕರಣಿ ಬೀದಿಯ ಮನೆಯ ಗೋಡೆ ಕುಸಿದಿದೆ. ರಾತ್ರಿ ಗೋಡೆ ಒಂದು ಕಡೆ ವಾಲುತ್ತಿದ್ದ ವೇಳೆ ಬಸವರಾಜಪ್ಪ ಅವರ ಮಗ-ಸೊಸೆ ಮನೆ ಹೊರಗೆ ಬಂದಿದ್ದಾರೆ. ಬಸವರಾಜಪ್ಪ ಹೊರ ಬರುವಷ್ಟರಲ್ಲೇ ಗೋಡೆ ಕುಸಿದಿದೆ.

ಗೋಡೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತೀವ್ರ ಗಾಯಗೊಂಡು ವೃದ್ಧ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಚನ್ನಗಿರಿ ತಹಶೀಲ್ದಾರ್ ರುಕ್ಮಿಣಿಬಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಚೆಕ್‌ ಅನ್ನು ತಹಸೀಲ್ದಾರ್ ನೀಡಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

50ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ವಿಜಯನಗರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು, ಸುಮಾರು 49 ಮನೆಗಳಿಗೆ ಹಾನಿಯಾಗಿದೆ. ಆರು ತಾಲೂಕುಗಳ ಪೈಕಿ, ಕೂಡ್ಲಿಗಿ ತಾಲ್ಲೂಕಿನಲ್ಲಿ 42 ಮನೆ ಸೇರಿ ಜಿಲ್ಲೆಯಲ್ಲಿ 49 ಮನೆಗಳಿಗೆ ಹಾನಿಯಾಗಿದೆ. ಹೊಸಪೇಟೆಯಲ್ಲಿ ಒಂದು ಮನೆಗೆ ಭಾಗಶಃ ಹಾನಿಯಾಗಿದೆ. ಹಡಗಲಿ, ಹರಪನಹಳ್ಳಿ ತಾಲೂಕುಗಳಲ್ಲಿ ತಲಾ ಒಂದೊಂದು ಮನೆ, ಕೊಟ್ಟೂರು ತಾಲೂಕಿನಲ್ಲಿ 4 ಮನೆಗೆ ಹಾನಿಯಾಗಿದೆ. ಹಡಗಲಿ ತಾಲೂಕಿನ ಕೆಂಚಮನಹಳ್ಳಿ ಗ್ರಾಮದಲ್ಲಿ ಎರಡು ಕುರಿಗಳು ಮೃತಪಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

Karnataka Rain : ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ನಿನ್ನೆ (ಅ.5) ಸುರಿದ ಭಾರಿ ಮಳೆಗೆ (Bengaluru Rain) ಬೆಂಗಳೂರಿನ ಮಲ್ಲೇಶ್ವರದ 13ನೇ ಕ್ರಾಸ್‌ನಲ್ಲಿ ರಸ್ತೆ ಕುಸಿದಿದೆ. ಎರಡು ವಾರದ ಹಿಂದೆ ಗುಂಡಿ ಮುಚ್ಚಲು ಹಾಕಿದ್ದ ಟಾರು ಮಳೆಯಿಂದಾಗಿ (Karnataka Rain) ಕುಸಿದು ಬಿದ್ದಿದೆ. ಕಳಪೆ ಕಾಮಗಾರಿ ಹಿನ್ನೆಲೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ರಸ್ತೆಗಳಲ್ಲೇ ನೀರು ನಿಂತಿದ್ದರಿಂದ ಹಲವು ಕಡೆಗಳಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಕೋಗಿಲು ಕ್ರಾಸ್ ಬಳಿ ತಡೆಗೋಡೆ ಕುಸಿದು ಅಪಾರ್ಟ್‌ಮೆಂಟ್‌ ಒಳಗೆ ನೀರು ನುಗ್ಗಿದೆ. ಬಿನ್ನಿಪೇಟೆ ಬಳಿ ಚೇಂಬರ್ ಕಾಂಪೌಂಡ್ ಕುಸಿದು ಇಪ್ಪತ್ತಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದೆ. ಹಲವು ಮನೆಗಳಿಗೆ ನೀರು ನುಗ್ಗಿದೆ. ಬಸವೇಶ್ವರ ನಗರ, ಪುಟ್ಟೇನಹಳ್ಳಿ ಯಲಹಂಕಾ ಸೇರಿದಂತೆ ಹಲವೆಡೆ ಮನೆಗಳಿಗೆ ಜಲಕಂಟಕ ಎದುರಾಗಿದೆ. ನಗರದಲ್ಲಿ ಸರಾಸರಿ 36 ಮಿ.ಮೀ ಮಳೆ ದಾಖಲಾಗಿದೆ. ಕೊಟ್ಟಿಗೆ ಪಾಳ್ಯದಲ್ಲಿ 113 ಮಿ.ಮೀ ದಾಖಲೆಯ ಮಳೆಯಾದರೆ, ಹಂಪಿನಗರ, ನಾಗಪುರಗಳಲ್ಲಿ 10 ಸೆಂ.ಮೀಗಿಂತಲೂ ಮಳೆಯಾಗಿದೆ.

Karnataka Rain
Karnataka Rain

ಯಾವ್ಯಾವ ಭಾಗದಲ್ಲಿ ಎಷ್ಟು ಮಳೆ?

ಕೊಟ್ಟಿಗೆಪಾಳ್ಯ : 113 ಮಿ.ಮೀ
ಹಂಪಿನಗರ : 108 ಮಿ.ಮೀ
ನಾಗಪುರ : 107.5 ಮಿ.ಮೀ
ಚೌಡೇಶ್ವರಿ : 79.5 ಮಿ.ಮೀ
ಮಾರುತಿಮಂದಿರ : 75.5 ಮಿ.ಮೀ
ನಂದಿನಿ ಲೇಔಟ್ : 71.5 ಮಿ.ಮೀ
ರಾಜಾಜಿನಗರ : 59 ಮಿ.ಮೀ
ನಾಯಂಡಹಳ್ಳಿ : 46 ಮಿ.ಮೀ
HAL ಏರ್ಪೋರ್ಟ್ : 45 ಮಿ.ಮೀ
ವಿದ್ಯಾರಣ್ಯಪುರ : 45 ಮಿ.ಮೀ
ಪುಟ್ಟೇನಹಳ್ಳಿ : 42.5 ಮಿ.ಮೀ
RR ನಗರ : 42.5 ಮಿ.ಮೀ
ರಾಜಮಹಲ್ ಗುಟ್ಟಹಳ್ಳಿ : 42.5 ಮಿ.ಮೀ

ಸೇರಿದಂತೆ ಸರಾಸರಿ 36 ಮಿ.ಮೀ ಮಳೆ ದಾಖಲು

Karnataka Rain

ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತ

ಬೆಂಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿದೆ. ಅಪಾರ್ಟ್‌ಮೆಂಟ್‌ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ಅಪಾರ್ಟ್‌ಮೆಂಟ್‌ ಆವರಣಕ್ಕೆ ನೀರು ನುಗ್ಗಿದೆ. ಸುಮಾರು 20 ವರ್ಷಕ್ಕೂ ಹಿಂದಿನ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದಿದೆ. ಒಂಭತ್ತು ಎಕರೆ ವಿಸ್ತೀರ್ಣವುಳ್ಳ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಆವರಣದಲ್ಲಿ 603 ಫ್ಲಾಟ್‌ನಲ್ಲಿ ಎರಡು ಸಾವಿರ ಮಂದಿ ವಾಸವಿದ್ದಾರೆ. ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ನಿವಾಸಿಗಳು ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದ್ದಾರೆ. ಟ್ರ್ಯಾಕ್ಟರ್ ಮೂಲಕ ಅಪಾರ್ಟ್‌ಮೆಂಟ್‌ ನಿವಾಸಿಗಳನ್ನು ಕರೆದೊಯ್ದಬೇಕಾಯಿತು.

Karnataka Rain
Karnataka Rain

ಅಗ್ನಿಶಾಮಕದಳ ಸಿಬ್ಬಂದಿಯಿಂದ ನಿರಂತರವಾಗಿ ನೀರನ್ನು ಹೊರಹಾಕುವ ಕಾರ್ಯ ನಡೆಯಿತು. 80ಕ್ಕೂ ಹೆಚ್ಚು ಕಾರು ನೂರಕ್ಕೂ ಹೆಚ್ಚು ಬೈಕ್ ಭಾಗಶ: ನೀರಿನಲ್ಲಿ ಮುಳುಗಡೆಯಾಗಿದೆ. ಟ್ರ್ಯಾಕ್ಟರ್ ಹಾಗೂ ಬೋಟ್ ಮೂಲಕ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ಹಿರಿಯ ನಾಗರೀಕರು ಮತ್ತು ಮಕ್ಕಳನ್ನು ಕರೆದೊಯ್ಯಲು ನಿವಾಸಿಗಳು ಪರದಾಡಿದರು.

ಕೆರೆಯಂತಾದ ಕ್ರೀಡಾಂಗಣ

ರಾತ್ರಿ ಸುರಿದ ಮಳೆಗೆ ಕ್ರೀಡಾಂಗಣ ಜಲಾವೃತವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿನ ತಾಲೂಕು ಮಟ್ಟದ ಕ್ರೀಡಾಂಗಣವು ಕೆರೆಯಂತೆ ಭಾಸವಾಗುತ್ತಿದೆ. ಪ್ರತಿಬಾರಿ ಮಳೆ ಬಂದಾಗ ಕ್ರೀಡಾಂಗಣ ಜಲಾವೃತಗೊಳ್ಳುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣವು ಕ್ರೀಡಾ ಇಲಾಖೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆ ಆಗಿದೆ. ಸರಿಯಾದ ನಿರ್ವಹಣೆ ಇಲ್ಲದೆ ಕ್ರೀಡಾಂಗಣ ಹಾಳಾಗಿದೆ.

ಕೆಸರು ಗದ್ದೆಯಾದ ರಸ್ತೆ

ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಯು ಕೆಸರು ಗದ್ದೆಯಾಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ ನಿವಾಸಿಗಳು ಪರದಾಡುತ್ತಿದ್ದಾರೆ. ಆನೇಕಲ್‌ನ ಚಂದಾಪುರ ಪುರಸಭೆ ವಾರ್ಡ್ ನಂಬರ್ 20ರಲ್ಲಿ ಘಟನೆ ನಡೆದಿದೆ. ಹೆಡ್ ಮಾಸ್ಟರ್ ಲೇಔಟ್‌ಗೆ ಸಂಪರ್ಕ್ ಕಲ್ಪಿಸುವ ರಸ್ತೆ ಇದಾಗಿದೆ. ಮಳೆ ಬಂದಾಗ ರಸ್ತೆ ಜಲಾವೃತಗೊಂಡು ಸಂಪೂರ್ಣ ಕೆಸರುಮಯವಾಗಿದೆ. ನಿತ್ಯ ಓಡಾಡುವ ಜನರಿಗೆ ಈ ರಸ್ತೆಯಲ್ಲಿ ಸಂಚರಿಸುವುದೆ ನರಕಯಾತನೆ ಆಗಿದೆ. ಮಳೆ ಬಂದಾಗ ಕೆಸರು ಗದ್ದೆ, ಬಿಸಿಲಿನ ಸಮಯದಲ್ಲಿ ಧೂಳಿನ ಸಮಸ್ಯೆ ಎದುರಾಗಿದೆ. ರಸ್ತೆಯಲ್ಲಿ ಹಳ್ಳಗುಂಡಿಗಳು ಕಾಣದೆ ಬಿದ್ದು ನಿವಾಸಿಗಳು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಚಂದಾಪುರ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather Forecast
ಮಳೆ4 ಗಂಟೆಗಳು ago

Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ5 ಗಂಟೆಗಳು ago

Dina Bhavishya : ಈ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನಾಡಬೇಡಿ

dasara 2024
ದಸರಾ ಸಂಭ್ರಮ17 ಗಂಟೆಗಳು ago

Dasara 2024 : ಮೈಸೂರು ದಸರಾ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ

53rd KVS National Games Kolkata Region School children win final match
ಬೆಂಗಳೂರು17 ಗಂಟೆಗಳು ago

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

5-year-old boy dies after eating cake in Bengaluru Couple's condition critical
ಬೆಂಗಳೂರು18 ಗಂಟೆಗಳು ago

Food Poisoning : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ದಂಪತಿ ಸ್ಥಿತಿ ಗಂಭೀರ

An electric wire fell on the woman Death due to electric shock
ಬೆಂಗಳೂರು18 ಗಂಟೆಗಳು ago

Electric shock : ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಕ್ಷಣಾರ್ಧದಲ್ಲೆ ಸುಟ್ಟುಕರಕಲು

Actor darshan
ಬೆಂಗಳೂರು20 ಗಂಟೆಗಳು ago

Actor Darshan : ರೇಣುಕಾಸ್ವಾಮಿ ಫೋಟೊಗಳು ನೈಜವಲ್ಲ!ಮತ್ತೆ ಎಫ್‌ಎಸ್‌ಎಲ್ ಮೊರೆ ಹೋದ ಖಾಕಿ ಪಡೆ

Bomb threat e-mails a headache for Bengaluru police
ಬೆಂಗಳೂರು21 ಗಂಟೆಗಳು ago

Bomb Threat : ಬೆಂಗಳೂರು ಪೊಲೀಸರಿಗೆ ತಲೆನೋವು ತಂದ ಬಾಂಬ್ ಬೆದರಿಕೆ‌ E-Mails

Road Accident
ಬಾಗಲಕೋಟೆ22 ಗಂಟೆಗಳು ago

Road Accident : ಬೈಕ್‌ ಸವಾರನ ಮುಖಕ್ಕೆ ಟ್ರ್ಯಾಕ್ಟರ್‌ ಬಡಿದು ಸಾವು;‌ ಪಾದಚಾರಿಗೆ ಡಿಕ್ಕಿ ಹೊಡೆದ ಚಿಗರಿ ಬಸ್

Self harming
ದಕ್ಷಿಣ ಕನ್ನಡ22 ಗಂಟೆಗಳು ago

Self Harming: ಮಾಜಿ ಶಾಸಕ‌ ಮೊಯ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ; ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ5 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌