Site icon Vistara News

Weather report : ನೈರುತ್ಯ ಮುಂಗಾರು ಮಂಕು; ನಾಳೆ ಚದುರಿದ ಮಳೆಯಷ್ಟೇ

Rain in girl

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain news) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (weather report) ಸಾಧ್ಯತೆಯಿದೆ. ಇನ್ನು ದಕ್ಷಿನ ಒಳನಾಡಿನಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿ ರಾಮನಗರ, ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ.

ಇದನ್ನೂ ಓದಿ: ಕರೆಂಟ್‌ ಶಾಕ್‌; ದಂಪತಿ ಸಾವು, ಮಗು ಅನಾಥ- ವಿಧಿಯ ಕ್ರೂರತೆಗೆ ಶಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಮಲೆನಾಡಲ್ಲಿ ಗುಡುಗು ಮಳೆ

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೀಸಲಿದೆ ಬಿರುಗಾಳಿ

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಹೀಗಾಗಿ ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ. ಕಡಲತೀರದಲ್ಲಿ ಇಳಿಯುವಾಗ ಎಚ್ಚರಿಕೆ ವಹಿಸುವುದು ಸೂಕ್ತ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version