ಬೆಂಗಳೂರು: ಮಾಯದಂತ ಮಳೆ ಬರುವ ಹೊತ್ತಿನಲ್ಲಿ ಮುಂಗಾರು ಮಂಕಾಗಿದೆ. ಮಳೆ ಸರಿದಿದ್ದು, ಸೂರ್ಯ ಪ್ರಕಾಶಿಸುತ್ತಿದ್ದಾನೆ. ಮಳೆಯಿಂದಲೇ ಮತ್ತೆ ಕೆರೆ-ಕಟ್ಟೆಗಳು ಬರಿದಾಗುತ್ತಿದೆ. ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ (Weather report) ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಇರಲಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯೊಂದರಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಲಘು ಮಳೆಯಾಗಬಹುದು. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆ ಇರಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲೂ ಜಿಟಿಜಿಟಿ ಮಳೆಯಾಗಲಿದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನು ರಾಜ್ಯದಲ್ಲಿ ಸೋಮವಾರ (ಆ.22) ನೈರುತ್ಯ ಮುಂಗಾರು ದುರ್ಬಲವಾಗಿತ್ತು. ರಾಜ್ಯಾದ್ಯಂತ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿರುವ ವರದಿ ಆಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ