ಬೆಂಗಳೂರು: ನೈರುತ್ಯ ಮುಂಗಾರು (Southwest monsoon) ದುರ್ಬಲವಾಗಿದ್ದು, ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಮಂಗಳವಾರದಂದು ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (weather report) ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.
ಇದನ್ನೂ ಓದಿ: Karnataka Live News : ನಾಡಿನೆಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಸೇರಿದಂತೆ live News Updates
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 22 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ