ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ (Weather report) ಇದೆ.
ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಯಾದ ಕೊಪ್ಪಳ, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ.
ಇದನ್ನೂ ಓದಿ: Family Dispute : ದಿನ ಬೆಳಗಾದರೆ ಜಗಳ; ಪೆಟ್ರೋಲ್ ಸುರಿದುಕೊಂಡ ದಂಪತಿ!
ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ