ಬೆಂಗಳೂರು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ (Rain News) ಮಳೆಯಾಗಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ (Weather report) ಇದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡಿನ ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಲಘು ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಇರಲಿದ್ದು, ಅಲ್ಲಲ್ಲಿ ಅತಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Rain News : ಮಳೆಗಾಗಿ ಹೂತಿರುವ ಶವವನ್ನೇ ಹೊರತೆಗೆದ ಗ್ರಾಮಸ್ಥರು!
ಸೆ.13ರಂದು ರಾಜ್ಯದಲ್ಲಿ ನೈರುತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಉಡುಪಿ 3, ಮಂಗಳೂರು, ಕಾರ್ಕಳ, ಕೊಲ್ಲೂರು, ಗೋಕರ್ಣ, ಕೊಪ್ಪ ಸೇರಿ ಸಕಲೇಶಪುರ, ಬೆಳ್ಳೂರು, ಬೆಂಗಳೂರು ನಗರ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪಣಂಬೂರು, ಧರ್ಮಸ್ಥಳ, ಪುತ್ತೂರು, ಸುಳ್ಯ, ಗೇರುಸೊಪ್ಪ, ಕುಮಟಾ, ಮುರಗೋಡು, ಮುದಗಲ್, ಸೋಮವಾರಪೇಟೆ, ಮಂಡಗದ್ದೆ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಆನೇಕಲ್ , ಹೆಬ್ಬೂರು, ಕನಕಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ