ಬೆಂಗಳೂರು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯಾದರೆ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗೆ ಅಲರ್ಟ್ ನೀಡಲಾಗಿದೆ. ಜತೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ವಿಜಯನಗರದಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಮತ್ತು ರಾಮನಗರ ಜಿಲ್ಲೆಗಳ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.
ಈ ಜಿಲ್ಲೆಗಳಲ್ಲಿ ಚದುರಿದ ಮಳೆ
ದಕ್ಷಿಣ ಒಳನಾಡಿನ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ರಾಯಚೂರಲ್ಲೂ ಲಘು ಮಳೆಯಾಗಲಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತಕ್ಕಮಟ್ಟಿಗೆ ಹಗುರ ಮಳೆಯಾಗಲಿದೆ. ಹಾಸನ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಇರಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು, ಬಿರುಗಾಳಿಯ ಮುನ್ನೆಚ್ಚರಿಕೆ
ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಇದನ್ನೂ ಓದಿ: Assault Case : ಆಂಟಿ ಎಂದವನಿಗೆ ಚಪ್ಪಲಿಯಿಂದ ಹೊಡೆದಳು!
ಸೆ.23ರಂದು ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರಿ ಮಳೆಯು ಕುರ್ಡಿ, ಮಧುಗಿರಿಯಲ್ಲಿ ತಲಾ 9, ಮಂಗಳೂರು ವಿಮಾನ ನಿಲ್ದಾಣ, ಸಿಂಧನೂರು, ಹುಣಸಗಿ ತಲಾ 7 ಸೆಂ.ಮೀ ಮಳೆಯಾಗಿದೆ. ಪಣಂಬೂರು, ಮೂಲ್ಕಿ, ಮಾಣಿ, ಪುತ್ತೂರು ಎಚ್ಎಂಎಸ್, ಜಾಲಹಳ್ಳಿ, ಕಕ್ಕೇರಿ, ಚಿಂತಾಮಣಿ ತಲಾ 6 ಸೆಂ.ಮೀ ಮಳೆಯಾಗಿದೆ.
ಕಾರ್ಕಳ, ಮಾನ್ವಿ, ಶಹಪುರ, ಗೌರಿಬಿದನೂರು ತಲಾ 5 ಸೆಂ.ಮೀ, ಧರ್ಮಸ್ಥಳ, ಉಡುಪಿ, ಕುಷ್ಟಗಿ, ಶಿಡ್ಲಘಟ್ಟ, ಭಾಗಮಂಡಲ ತಲಾ 4, ಬೆಳ್ತಂಗಡಿ, ಕೆಂಭಾವಿ, ಶೋರಾಪುರ, ನಾಲ್ವತವಾಡ, ರಾಯಚೂರು, ಬೇವೂರು, ದೇವದುರ್ಗ, ತೊಂಡೆಭಾವಿ, ಚಿಕ್ಕಬಳ್ಳಾಪುರ ರಾಯಲ್ಪಾಡು, ಹೊಸಕೋಟೆ, ಶೃಂಗೇರಿ ಎಚ್ಎಂಎಸ್, ಕಳಸ, ತ್ಯಾಗರ್ತಿ, ಕೋಲಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
ಮಂಗಳೂರು, ಸುಳ್ಯ, ಕುಂದಾಪುರ, ಕೋಟ, ಕಾರವಾರ, ಗೋಕರ್ಣ, ಹೊನಾವರ, ಆಲಮಟ್ಟಿ ಎಚ್ಎಂಎಸ್, ಸೇಡಂ, ತಾವರಗೇರ, ಕವಡಿಮಟ್ಟಿ, ಮಸ್ಕಿ, ದೊಡ್ಡಬಳ್ಳಾಪುರ, ದೇವನಹಳ್ಳಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ , ಜಯಪುರ ತಲಾ 2 ಸೆಂ.ಮೀ ಮಳೆಯಾಗಿದೆ.
ಉಪ್ಪಿನಂಗಡಿ, ಕದ್ರಾ, ಶಿರಾಲಿ, ಮಂಕಿ, ಕಿರವತ್ತಿ, ಕುಮಟಾ, ಯಲ್ಲಾಪುರ, ನಾರಾಯಣಪುರ ಎಚ್ಎಂಎಸ್, ಗಬ್ಬೂರು, ತುಮಕೂರು, ಎನ್ ಆರ್ ಪುರ, ಕೊಟ್ಟಿಗೆಹಾರ, ವಿರಾಜಪೇಟೆ, ಪೊನ್ನಂಪೇಟೆ ಪಿಡಬ್ಲ್ಯೂಡಿ, ನಾಪೋಕ್ಲು, ಕೃಷ್ಣರಾಜಪೇಟೆ, ಬಿ ದುರ್ಗ, ಮಾಲೂರು, ತಾಳಗುಪ್ಪ, ಹುಂಚದಕಟ್ಟೆ , ಹರಪನಹಳ್ಳಿ , ಸಕಲೇಶಪುರ, ಚಿತ್ರದುರ್ಗ, ಸಂತೆಬೆನ್ನೂರಲ್ಲಿ ತಲಾ 1ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ