ಬೆಂಗಳೂರು: ಕರಾವಳಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ (Weather report) ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಡಗಿನಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ.
ಉತ್ತರ ಒಳನಾಡಿನ ಬೀದರ್ ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ ಮತ್ತು ಯಾದಗಿರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಮನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಸಂಜೆ ವೇಳೆಗೆ ಮಳೆಯಾಗುವ ಬಹಳ ಸಾಧ್ಯತೆ ಇವೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ 40-45 ಕಿ.ಮೀ ವೇಗದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.
ಇದನ್ನೂ ಓದಿ:Rain News : ಧಾರಾಕಾರ ಮಳೆಗೆ ಕುಸಿದು ಬಿದ್ದ ಗೋಡೆ; ಬಾಲಕಿ ದಾರುಣ ಸಾವು
ನೈರುತ್ಯ ಮುಂಗಾರು ಸೆ.27ರಂದು ಕರಾವಳಿಯಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಪಣಂಬೂರು, ಕಾರ್ಕಳ, ಕೋಟ, ನರಗುಂದದಲ್ಲಿ ತಲಾ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಕ್ಯಾಸಲ್ ರಾಕ್, ಗೇರ್ಸೊಪ್ಪ, ಕುಕನೂರಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಮಣಿ, ಪುತ್ತೂರು, ಬೆಳ್ತಂಗಡಿ, ಕದ್ರಾ, ಗೋಕರ್ಣ ಶಿರಾಲಿ, ಯಡ್ವಾಡದಲ್ಲಿ ತಲಾ 3 ಸೆಂ.ಮೀ, ಮಂಗಳೂರು, ಮೂಲ್ಕಿ, ಉಡುಪಿ, ಯಲ್ಲಾಪುರ, ಮಂಕಿ, ಕುಮಟಾ, ಚಿಕ್ಕೋಡಿ, ಕಲ್ಘಟಗಿ, ಮಹಾಲಿಂಗಪುರ, ಹುಣಸೂರು 2, ಜಗಲಬೆಟ್ಟ, ಮಂಚಿಕೆರೆ , ಸುಳ್ಯ, ಧರ್ಮಸ್ಥಳ, ಕೊಲ್ಲೂರು, ಕುಂದಾಪುರ, ಹೊನವರ ಕುಷ್ಟಗಿ, ಹುಕ್ಕೇರಿ, ಗೋಕಾಕ, ಚಿಂಚೋಳಿ, ಕೊಟ್ಟಿಗೆಹಾರ, ಎಲೆಕ್ಟ್ರಾನಿಕ್ ಸಿಟಿ ಎಆರ್ಜಿ , ಭಾಗಮಂಡಲ, ಕುಡತಿನಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ