Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ನೆರೆ ಹಾನಿ ಪ್ರದೇಶಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ - Vistara News

ಮಳೆ

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ನೆರೆ ಹಾನಿ ಪ್ರದೇಶಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

Yadgiri News: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಹಾನಿಯಾದ ಪ್ರದೇಶಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಹಾನಿ ಪ್ರದೇಶ ವೀಕ್ಷಣೆ ಮಾಡಿದರು.

VISTARANEWS.COM


on

Kolluru bridge inundation by Krishna river flood Chalavadi Narayanaswamy visits the flood damaged area
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಕೃಷ್ಣಾ ನದಿ ಪ್ರವಾಹದಿಂದ ಹಾನಿಯಾದ ಪ್ರದೇಶಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಹಾನಿ ಪ್ರದೇಶ ವೀಕ್ಷಣೆ (Yadgiri News) ಮಾಡಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದ ಕೃಷ್ಣಾ ನದಿ ಪ್ರವಾಹದಿಂದ ಜಲಾವೃತವಾದ ಕೊಳ್ಳುರು ಸೇತುವೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಕೃಷ್ಣಾ ನದಿ ಪ್ರವಾಹದಿಂದ ಸೇತುವೆ ಮುಳುಗಡೆಯಾಗಿ ಜನರು ಎದುರಿಸುವ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ಪ್ರವಾಹದಿಂದ ಎದುರಿಸುವ ಸಮಸ್ಯೆಗಳ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಅವರಲ್ಲಿ ನೋವು ತೊಡಿಕೊಂಡರು.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಕೃಷ್ಣಾ ನದಿ ಪ್ರವಾಹದಿಂದ ಪ್ರತಿ ವರ್ಷ ಸೇತುವೆ ಮುಳುಗಡೆಯಿಂದ ರಾಯಚೂರುಗೆ ತೆರಳಲು ಸಮಸ್ಯೆ ಆಗಲಿದೆ‌. ಸೇತುವೆ ಎತ್ತರವಾಗಿ ನಿರ್ಮಾಣ ಮಾಡಲು ಸಾಕಷ್ಟು ಬಾರಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರು ನಮ್ಮ ಬೇಡಿಕೆ ಈಡೇರಿಲ್ಲ.

ಪ್ರತಿ ವರ್ಷ ಪ್ರವಾಹ ಬಂದಾಗ ಸೇತುವೆ ಮುಳುಗಡೆಯಾದ ನಂತರ ಎಲ್ಲರೂ ಪಿಕ್‌ನಿಕ್‌ನಂತೆ ಬಂದು ಭೇಟಿ ನೀಡಿ ಹೋಗುತ್ತಾರೆ. ಈ ಸೇತುವೆ ಎತ್ತರವಾಗಿ ನಿರ್ಮಾಣ ಮಾಡಬೇಕು. ಅದೇ ರೀತಿ ಪ್ರವಾಹದಿಂದ ಬೆಳೆ ಹಾನಿಯಾಗುತ್ತಿದೆ, ಸರ್ಕಾರ ಸೂಕ್ತ ಪರಿಹಾರ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಡಿಸಿ ಅವರೊಂದಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾಹಿತಿ ಪಡೆದರು. ಸೇತುವೆ ಎತ್ತರ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತದೆ ಎಂದು ಡಿಸಿ ತಿಳಿಸಿದರು.

ನಂತರ ಯಕ್ಷಿಂತಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿ ರೈತರ ಸಮಸ್ಯೆ ಆಲಿಸಿದರು.

ಈ ವೇಳೆ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆರು ತಂಡಗಳಲ್ಲಿ ನೆರೆ ಹಾನಿ ಪ್ರದೇಶ ವೀಕ್ಷಣೆ ಮಾಡಲಾಗುತ್ತದೆ. ಅದರಂತೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಹಾನಿ ಪರಿಶೀಲನೆ ಮಾಡಲಾಗಿದೆ. ಭೇಟಿ ನೀಡಿದ ವರದಿಯನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಗುತ್ತದೆ. ಕೊಳ್ಳುರು ಸೇತುವೆ ಎತ್ತರವಾಗಿ ನಿರ್ಮಾಣ ಮಾಡಿಸಲು ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ ಎಂದರು. ರಾಜ್ಯ ಸರ್ಕಾರ ಕಡಿಮೆ ಪರಿಹಾರ ಹಣ ನೀಡದೇ ಹೆಚ್ಚಿನ ಪರಿಹಾರ ನೀಡಲು ಇಚ್ಛಾಶಕ್ತಿ ತೊರಿಸಿ ಮಾನವೀಯತೆ ತೊರಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಈ ಸಂದರ್ಭದಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ, ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ಡಿಸಿ ಡಾ. ಸುಶೀಲಾ ಬಿ, ಎಸ್ಪಿ ಜಿ. ಸಂಗೀತಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಸೀಲ್ದಾರ್‌ ಉಮಾಕಾಂತ ಹಳ್ಳೆ, ಪರಶುರಾಮ ಕುರಕುಂದಿ, ವಿಲಾಸ ಪಾಟೀಲ, ಸಿದ್ದಣ್ಣಗೌಡ ಕಾಡಂನೋರ್, ಶಿವು ಕೊಂಕಲ್, ದೇವರಾಜ ನಾಯಕ, ವಿರುಪಾಕ್ಷಪ್ಪಗೌಡ ಮಾಚನೂರು, ಬಸವರಾಜ ಸೊನ್ನದ, ಬಸವರಾಜ ಅರಕೇರಿ, ವೀರುಪಾಕ್ಷಯ್ಯ ಸ್ವಾಮಿ ಸೇರಿದಂತೆ ಇತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

Karnataka Rain: 3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ.

VISTARANEWS.COM


on

Karnataka Rain
ಬಾಳೆಹೊನ್ನೂರು ಪಟ್ಟಣದ ಸಂತೆ ಮಾರುಕಟ್ಟೆ ಮುಳುಗಿರುವುದು.
Koo

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭದ್ರಾ ನದಿ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಸತತ ಮಳೆಯಿಂದ (Karnataka Rain) ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣ ಮುಳುಗಡೆಯಾಗಿದೆ. ದೋಬಿ ಹಳ್ಳ ಪ್ರವಾಹಕ್ಕೆ ‌ಬಾಳೆಹೊನ್ನೂರಿನ ನದಿ ತಟದ ಸಂತೆ ಮಾರುಕಟ್ಟೆ, ಮನೆಗಳು, ಅಂಗಡಿ ಮಳಿಗೆಗಳು, ಕಾಫಿ, ಅಡಿಕೆ ತೋಟಗಳು ಮುಳುಗಡೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಭಾರಿ ಪ್ರಮಾಣ ನೀರಿನಿಂದ ಕಾಫಿ, ಅಡಕೆಗೆ ಕೊಳೆ ರೋಗ ಆವರಿಸುವ ಭೀತಿ ಎದುರಾಗಿದೆ. ಮತ್ತಷ್ಟು ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ. ಮಳೆ ಹೆಚ್ಚಾದಂತೆ ಕ್ಷಣ ಕ್ಷಣಕ್ಕೂ ಭದ್ರಾ ನೀರಿನ ಅರಿವು ಹೆಚ್ಚಾಗುತ್ತಿದೆ.

ಇದನ್ನೂ ಓದಿ | Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿತ

ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದಲ್ಲಿ ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕ ಸ್ಥಗಿತವಾಗೋ ಸಾಧ್ಯತೆ ಇದೆ. ಸುಮಾರು 60 ಅಡಿಯಷ್ಟು ಗುಡ್ಡದ ಮಣ್ಣು ಕುಸಿದು ಬಿದ್ದಿದ್ದು, ರಸ್ತೆ ಸಂಪರ್ಕ‌ ಬಂದ್ ಆದಲ್ಲಿ 500ಕ್ಕೂ ಹೆಚ್ಚು ಕುಟುಂಬಗಳ ಸ್ಥಿತಿ ಅತಂತ್ರವಾಗಲಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡು-ಶೃಂಗೇರಿ ರಸ್ತೆಯಲ್ಲಿ 3-4 ಕಡೆ ರಸ್ತೆ ಬದಿ ಗುಡ್ಡ ಕುಸಿದಿದೆ.

ಜಲಸ್ಫೋಟದಿಂದ ರಸ್ತೆಗೆ ಬಂದು ಕೂತ ಗುಡ್ಡ

ಕಳಸದಲ್ಲಿ ಭೂಮಿಯೊಳಗೆ ಜಲಸ್ಫೋಟದಿಂದ ಗುಡ್ಡ ಜರುಗಿ ರಸ್ತೆಗೆ ಬಂದಿರುವ ಘಟನೆ ನಡೆದಿದೆ. ಇದರಿಂದ ಕಳಸ-ಬಲಿಗೆ-ಹೊರನಾಡು ಸಂಪರ್ಕ ಕಡಿತವಾಗಿದೆ.

ಭಾರಿ ಮಳೆಗೆ ಮುಳುಗಿದ ಸೇತುವೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಶಿರಸಿ ತಾಲೂಕಿನ ದೊಡ್ನಳ್ಳಿ ಭಾಗದಲ್ಲಿ ಮಳೆಗೆ ಸೇತುವೆ ಮುಳುಗಿದ್ದು, ಚಿಪಗಿ-ದೊಡ್ನಳ್ಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ದೊಡ್ನಳ್ಳಿ ಭಾಗದಿಂದ ಓಡಾಡುವ ಗ್ರಾಮಸ್ಥರಿಗೆ ತೊಂದರೆಯಾಗಿದೆ.

ಸೇತುವೆ ಬಳಿ ಸಂಗ್ರಹಗೊಂಡಿದ್ದ ಮರದ ತುಂಡುಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ. ಮಳೆಯಿಂದಾಗಿ ದೊಡ್ನಳ್ಳಿ ಪಂಚಾಯತ್ ವ್ಯಾಪ್ತಿಯ ಕೆಳಗಿನ ಎಸಳೆ ಗ್ರಾಮದಲ್ಲಿ ಜಮೀನು ಜಲಾವೃತವಾಗಿದ್ದು, 50 ಎಕರೆಗೂ ಅಧಿಕ ನಾಟಿ ಮಾಡಿದ ಗದ್ದೆ, ಕಬ್ಬಿನ ತೋಟಕ್ಕೆ ನೀರು ನುಗ್ಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ಭದ್ರಾ ನದಿಗಳು

ಶಿವಮೊಗ್ಗ: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ತುಂಗಾ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದವಾದ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೂಡಲಿ ದೇವಸ್ಥಾನದ ಬಳಿ ಸ್ನಾನಘಟ್ಟ ಮುಳುಗಡೆಯಾಗಿದೆ.

ಭದ್ರಾವತಿ ಬಳಿ 30 ಮನೆಗಳು ಸಂಪೂರ್ಣ ಜಲಾವೃತ

ಭದ್ರಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕಿನ ಕವಲುಗುಂದಿ ಗ್ರಾಮದಲ್ಲಿ 30 ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಭದ್ರಾವತಿ ನಗರದ ಕಾಳಜಿ ಕೇಂದ್ರಕ್ಕೆ 30 ಕುಟುಂಬಗಳನ್ನು ಶಿಫ್ಟ್‌ ಮಾಡಲಾಗಿದೆ. ತಡಸ ಧಡಮ್ಘಟ್ಟ ರಸ್ತೆ ಸಂಪರ್ಕ ಬಂದ್ ಅಗಿದ್ದು, ಹತ್ತಾರು ಹಳ್ಳಿಗಳ ಸಂಪರ್ಕ ಸ್ಥಗಿತಗೊಂಡಿದೆ.

ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ

ದಾವಣಗೆರೆ: ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ತುಂಗಾ ಹಾಗೂ ಭದ್ರ ಎರಡು ಜಲಾಶಯಗಳಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಹಳ್ಳಿಗಳ ರಸ್ತೆ ಸಂಪರ್ಕ ಕಡಿತವಾಗಿದೆ.

ಪುಣ್ಯಕ್ಷೇತ್ರ ಉಕ್ಕಡಗಾತ್ರಿ ತುಮ್ಮಿನಕಟ್ಟೆ, ಪತೇಪುರ್ ರಸ್ತೆ ಸಂಪರ್ಕ ಕಡಿತವಾಗಿದ್ದು, ತುಂಗಾಭದ್ರ ನದಿ ಪ್ರವಾಹದಿಂದ ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಸೇತುವೆ ಮುಳುಗಡೆಯಿಂದ ಸುಮಾರು 10 ಕಿ.ಮೀ ಸುತ್ತಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಸೇತುವೆ ಮುಳುಗಡೆಯಿಂದ ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ನದಿ ಪ್ರವಾಹದಿಂದ ತರಕಾರಿ ಬೆಳೆ, ಭತ್ತದ ಗದ್ದೆ, ಅಡಿಕೆ ತೆಂಗಿನ ತೋಟಗಳು ಜಲಾವೃತವಾಗಿವೆ. ಇದರಿಂದ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.

ಇದನ್ನೂ ಓದಿ | Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

ಕೊಪ್ಪಳದಲ್ಲಿ ಪ್ರವಾಹ ಭೀತಿ

ಕೊಪ್ಪಳ: ನೀರಿನ ಪ್ರಮಾಣ ಮತ್ತೆ ಏರಿಕೆಯಾದ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ ನದಿಗೆ 1.39 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಮತ್ತೆ ಚಿಕ್ಕಜಂತಕಲ್ ಸೇತುವೆ ಮುಳುಗಿದ್ದು, ವಿರುಪಾಪುರಗಡ್ಡೆ, ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತಗೊಂಡಿದೆ.

ಆನೆಗೊಂದಿಯ ಬಳಿಯ ಶ್ರೀಕೃಷ್ಣದೇವರಾಯ ಸಮಾಧಿ, ಬೆನ್ನೂರು ಹೊಳೆಬಸವೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಕೃಷಿ ಭೂಮಿಗೆ ನೀರು ನುಗ್ಗುವ ಸಾಧ್ಯತೆ ಇದೆ.

Continue Reading

ದೇಶ

Wayanad Landslide: ವಯನಾಡ್‌ ಅಕ್ಷರಶಃ ಸ್ಮಶಾನ; ಭೂಕುಸಿತ ಸ್ಥಳಕ್ಕೆ ರಾಹುಲ್‌, ಪ್ರಿಯಾಂಕಾ ಭೇಟಿ ಸ್ಥಗಿತ

Wayanad landslide: ಪ್ರಿಯಾಂಕಾ ಮತ್ತು ನಾನು ನಾಳೆ ವಯನಾಡ್‌ಗೆ ಭೇಟಿ ನೀಡಲು ನಿರ್ಥರಿಸಿದ್ದೆವು. ಆದಾಗ್ಯೂ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣ, ನಾವು ಭೇಟಿ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ನಮಗೆ ತಿಳಿಸಿದ್ದಾರೆ. ಆದರೂ ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಜನರನ್ನು ಭೇಟಿಯಾಗಲಿದ್ದೇನೆ ಎಂದಿದ್ದಾರೆ.

VISTARANEWS.COM


on

wayanad landslide
Koo

ವಯನಾಡ್‌: ಭೀಕರ ಭೂಕುಸಿತದಿಂದ ಕೇರಳದ ವಯನಾಡ್‌(Wayanad landslide) ಅಕ್ಷರಶಃ ಸ್ಮಶಾನದಂತಾಗಿದೆ. ಸುಮಾರು 400ಕ್ಕೂ ಹೆಚ್ಚು ಕುಟುಂಬಗಳು ಭೂಕುಸಿತ ಭೀಕರತೆಗೆ ಸಿಲುಕಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕಣ್ಮರೆಯಾಗಿರುವವರ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಲೇ ಇದೆ. ಈ ಹಿನ್ನೆಲೆ ದುರಂತ ಸ್ಥಳಕ್ಕೆ ಇಂದು ಭೇಟಿ ನೀಡಲು ನಿರ್ಧರಿಸಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾ(Priyanka Gandhi Vadra) ಅವರು ತಮ್ಮ ಭೇಟಿಯನ್ನು ಸ್ಥಗಿತಗೊಳಿಸಿದ್ದಾರೆ.

ಪ್ರತಿಕೂಲ ವಾತಾವರಣದಿಂದಾಗಿ ಇವರಿಬ್ಬರ ಭೇಟಿಗೆ ಅಧಿಕಾರಿಗಳು ಅಡ್ಡಿಪಡಿಸಿದ್ದು, ಅವರ ಭೇಟಿಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ರಾಹುಲ್‌, ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ನಾಳೆ ವಯನಾಡ್‌ಗೆ ಭೇಟಿ ನೀಡಲು ನಿರ್ಥರಿಸಿದ್ದೆವು. ಆದಾಗ್ಯೂ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣ, ನಾವು ಭೇಟಿ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ನಮಗೆ ತಿಳಿಸಿದ್ದಾರೆ. ಆದರೂ ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಜನರನ್ನು ಭೇಟಿಯಾಗಲಿದ್ದೇನೆ ಎಂದಿದ್ದಾರೆ.

ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಪೋಸ್ಟ್‌ ಕೂಡ ಮಾಡಿದ್ದು, ವಯನಾಡ್‌ನಲ್ಲಿರುವ ನನ್ನ ಸಹೋದರ ಸಹೋದರಿಯರೇ, ನಾವು ನಾಳೆ ವಯನಾಡಿಗೆ ಬರಲು ಸಾಧ್ಯವಾಗದಿದ್ದರೂ, ಈ ದುರಂತ ಸಮಯದಲ್ಲಿ ನಮ್ಮ ಹೃದಯವು ನಿಮ್ಮೊಂದಿಗಿದೆ ಮತ್ತು ನಾವು ನಿಮ್ಮೆಲ್ಲರಿಗಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಪೋಸ್ಟ್‌ ಮಾಡಿದ್ದಾರೆ.

ವಯನಾಡು ದುರಂತದಲ್ಲಿ ಪ್ರಸ್ತುತ ಸಾವಿನ ಸಂಖ್ಯೆ 143ಕ್ಕೆ ಏರಿಕೆ ಆಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇನ್ನು ವಯನಾಡಿನಲ್ಲಿ 13ಕನ್ನಡಿಗರೂ ನಾಪತ್ತೆಯಾಗಿದ್ದು, ನಾಲ್ವರ ಶವ ಪತ್ತೆ ಪತ್ತೆಯಾಗಿದೆ.

ಇದನ್ನೂ ಓದಿ: Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Continue Reading

ಮಳೆ

Karnataka Weather : ಭಯಂಕರ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಭಾಗಕ್ಕೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ಭರ್ಜರಿ (Rain News) ಮಳೆಯಾಗಲಿದ್ದು, 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ (Karnataka Weather Forecast) ವ್ಯಾಪಕ ಮಳೆಯಾಗುತ್ತಿದ್ದು, ಜನರ ನಿದ್ದೆಗೆಡಿಸಿದೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಮೈಸೂರು, ಚಿಕ್ಕಬಳ್ಳಾಪುರ ಭಾರಿ ಮಳೆ

ದಕ್ಷಿಣಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

ಬೆಳಗಾವಿಯಲ್ಲಿ ಮಧ್ಯಮ ಮಳೆ

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ವಿಪರೀತ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ಇರಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Flood: ಭಾರಿ ಮಳೆ, ಪ್ರವಾಹ ಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಡಿಸಿಗಳಿಗೆ ಸಿಎಂ ಖಡಕ್ ಸೂಚನೆ

Karnataka Flood: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು, ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

VISTARANEWS.COM


on

Karnataka Flood
Koo

ನವದೆಹಲಿ: ರಾಜ್ಯದಲ್ಲೆಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ (Karnataka Flood) ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ಸೂಚನೆ ನೀಡಿದ್ದಾರೆ.

ಕೇರಳ ಭೂಕುಸಿತ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು, ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಚಾಮರಾಜ ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:

08226-223163
08226-223161
08226-223160
ವಾಟ್ಸಾಪ್‌ ಸಂಖ್ಯೆ: 9740942901

ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳ ನೇಮಕ

ನವ ದೆಹಲಿ: ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ (Wayanad Landslide) ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದ್ದು, ಇದಕ್ಕಾಗಿ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ.ಗಳು ಹಾಗೂ 70 ಮಂದಿ ವಿವಿಧ ರ‍್ಯಾಂಕ್‌ನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡೀಪುರ ಚೆಕ್ ಪೋಸ್ಟ್‌ನಲ್ಲಿ ಈ ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.

ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್‌ಗಳನ್ನು ಎಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Wayanad Landslide: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ

ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

Continue Reading
Advertisement
Kabini Dam
ಕರ್ನಾಟಕ12 mins ago

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Shiradi Ghat
ಕರ್ನಾಟಕ38 mins ago

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Road Rage
ದೇಶ56 mins ago

Road Rage: ಸ್ಕೂಟಿಗೆ ಬೈಕ್‌ ಟಚ್‌ ಆಗಿದ್ದಕ್ಕೆ ಜಗಳ; ಗುಂಡು ಹಾರಿಸಿ 2 ಮಕ್ಕಳ ತಾಯಿಯನ್ನು ಕೊಂದ ವ್ಯಕ್ತಿ

Rashid khan 600 wickets
ಕ್ರೀಡೆ60 mins ago

Rashid khan 600 wickets: ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ ರಶೀದ್​ ಖಾನ್​; ಮೊದಲ ಸ್ಪಿನ್ನರ್

Viral video
ವೈರಲ್ ನ್ಯೂಸ್60 mins ago

Viral Video: ಕೇಶ ವಿನ್ಯಾಸಕ್ಕೆ ಸಲಾಕೆ ಬಳಸಿದ ಕ್ಷೌರಿಕ!

Virat Kohli
ಕ್ರೀಡೆ2 hours ago

Virat Kohli: ಗಂಭೀರ್​ ಮಾರ್ಗದರ್ಶನದಂತೆ ಅತ್ಯಂತ ಜೋಶ್​ನಿಂದ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಕೊಹ್ಲಿ; ಫೋಟೊ ವೈರಲ್​

Infosys
ಕರ್ನಾಟಕ2 hours ago

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Paris Olympics
ಕ್ರೀಡೆ3 hours ago

Paris Olympics: ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಮುಗ್ಗರಿಸಿದ ಮಣಿಕಾ ಬಾತ್ರಾ

Indians spend 15 billion hours waiting for customer service time in 2023 ServiceNow information
ದೇಶ3 hours ago

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Former MLA Rupali Nayka appeals to DC to resolve various issues under Karwara Ankola Assembly Constituency
ಉತ್ತರ ಕನ್ನಡ3 hours ago

Uttara Kannada News: ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕರಿಂದ ಡಿಸಿಗೆ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌