ಯಾದಗಿರಿ: ಕೃಷ್ಣಾ ನದಿ ಪ್ರವಾಹದಿಂದ ಹಾನಿಯಾದ ಪ್ರದೇಶಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಹಾನಿ ಪ್ರದೇಶ ವೀಕ್ಷಣೆ (Yadgiri News) ಮಾಡಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದ ಕೃಷ್ಣಾ ನದಿ ಪ್ರವಾಹದಿಂದ ಜಲಾವೃತವಾದ ಕೊಳ್ಳುರು ಸೇತುವೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಕೃಷ್ಣಾ ನದಿ ಪ್ರವಾಹದಿಂದ ಸೇತುವೆ ಮುಳುಗಡೆಯಾಗಿ ಜನರು ಎದುರಿಸುವ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಪ್ರವಾಹದಿಂದ ಎದುರಿಸುವ ಸಮಸ್ಯೆಗಳ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಅವರಲ್ಲಿ ನೋವು ತೊಡಿಕೊಂಡರು.
ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ
ಕೃಷ್ಣಾ ನದಿ ಪ್ರವಾಹದಿಂದ ಪ್ರತಿ ವರ್ಷ ಸೇತುವೆ ಮುಳುಗಡೆಯಿಂದ ರಾಯಚೂರುಗೆ ತೆರಳಲು ಸಮಸ್ಯೆ ಆಗಲಿದೆ. ಸೇತುವೆ ಎತ್ತರವಾಗಿ ನಿರ್ಮಾಣ ಮಾಡಲು ಸಾಕಷ್ಟು ಬಾರಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರು ನಮ್ಮ ಬೇಡಿಕೆ ಈಡೇರಿಲ್ಲ.
ಪ್ರತಿ ವರ್ಷ ಪ್ರವಾಹ ಬಂದಾಗ ಸೇತುವೆ ಮುಳುಗಡೆಯಾದ ನಂತರ ಎಲ್ಲರೂ ಪಿಕ್‌ನಿಕ್‌ನಂತೆ ಬಂದು ಭೇಟಿ ನೀಡಿ ಹೋಗುತ್ತಾರೆ. ಈ ಸೇತುವೆ ಎತ್ತರವಾಗಿ ನಿರ್ಮಾಣ ಮಾಡಬೇಕು. ಅದೇ ರೀತಿ ಪ್ರವಾಹದಿಂದ ಬೆಳೆ ಹಾನಿಯಾಗುತ್ತಿದೆ, ಸರ್ಕಾರ ಸೂಕ್ತ ಪರಿಹಾರ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಡಿಸಿ ಅವರೊಂದಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾಹಿತಿ ಪಡೆದರು. ಸೇತುವೆ ಎತ್ತರ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತದೆ ಎಂದು ಡಿಸಿ ತಿಳಿಸಿದರು.
ನಂತರ ಯಕ್ಷಿಂತಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿ ರೈತರ ಸಮಸ್ಯೆ ಆಲಿಸಿದರು.
ಈ ವೇಳೆ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆರು ತಂಡಗಳಲ್ಲಿ ನೆರೆ ಹಾನಿ ಪ್ರದೇಶ ವೀಕ್ಷಣೆ ಮಾಡಲಾಗುತ್ತದೆ. ಅದರಂತೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಹಾನಿ ಪರಿಶೀಲನೆ ಮಾಡಲಾಗಿದೆ. ಭೇಟಿ ನೀಡಿದ ವರದಿಯನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಗುತ್ತದೆ. ಕೊಳ್ಳುರು ಸೇತುವೆ ಎತ್ತರವಾಗಿ ನಿರ್ಮಾಣ ಮಾಡಿಸಲು ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ ಎಂದರು. ರಾಜ್ಯ ಸರ್ಕಾರ ಕಡಿಮೆ ಪರಿಹಾರ ಹಣ ನೀಡದೇ ಹೆಚ್ಚಿನ ಪರಿಹಾರ ನೀಡಲು ಇಚ್ಛಾಶಕ್ತಿ ತೊರಿಸಿ ಮಾನವೀಯತೆ ತೊರಬೇಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!
ಈ ಸಂದರ್ಭದಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ, ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ಡಿಸಿ ಡಾ. ಸುಶೀಲಾ ಬಿ, ಎಸ್ಪಿ ಜಿ. ಸಂಗೀತಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಸೀಲ್ದಾರ್ ಉಮಾಕಾಂತ ಹಳ್ಳೆ, ಪರಶುರಾಮ ಕುರಕುಂದಿ, ವಿಲಾಸ ಪಾಟೀಲ, ಸಿದ್ದಣ್ಣಗೌಡ ಕಾಡಂನೋರ್, ಶಿವು ಕೊಂಕಲ್, ದೇವರಾಜ ನಾಯಕ, ವಿರುಪಾಕ್ಷಪ್ಪಗೌಡ ಮಾಚನೂರು, ಬಸವರಾಜ ಸೊನ್ನದ, ಬಸವರಾಜ ಅರಕೇರಿ, ವೀರುಪಾಕ್ಷಯ್ಯ ಸ್ವಾಮಿ ಸೇರಿದಂತೆ ಇತರರು ಇದ್ದರು.