ಅಭಿಷೇಕ್ ಅಂಬರೀಶ್ ಹಾಗೂ ಅವಿವ ಬಿಡಪ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಬಿಡಪ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು.
ಅಭಿಷೇಕ್ ಅಂಬರೀಶ್ ಅವರು ಮದುವೆ ಮಂಟಪಕ್ಕೆ ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು. ಮದುವೆಗೆ ಸೆಲೆಬ್ರಿಟಿಗಳ ದಂಡು ನೆರೆದಿತ್ತು.
ಈಗಾಗಲೇ ಹಳದಿ ಶಾಸ್ತ್ರ, ಮೆಹಂದಿ ಶಾಸ್ತ್ರದಲ್ಲಿ ಹೊಸ ಜೋಡಿ ಮಿಂಚಿರುವ ಫೋಟೊ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್ ಹಾಗೆಯೇ ಉಳಿಸಿಕೊಂಡಿದ್ದಾರೆ.
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.
ಬೆಳಗ್ಗೆ 9.30 ಸುಮಾರಿಗೆ ಅಭಿಷೇಕ್ -ಅವಿವ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ಇದೆ.